Chidambaram INX Media Case Live Updates ಅರ್ಜಿ ವಿಚಾರಣೆ ಸಾಧ್ಯವಿಲ್ಲ ಎಂದ ಸುಪ್ರೀಂ: ಚಿದಂಬರಂಗೆ ಬಂಧನ ಭೀತಿ

ನವದೆಹಲಿ, ಆಗಸ್ಟ್ 21: ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಂಕಷ್ಟಕ್ಕೆ ಸಿಲುಕಿರುವ ಕೇಂದ್ರ ಸಚಿವ ಪಿ. ಚಿದಂಬರಂ ಅವರು ನಾಪತ್ತೆಯಾಗಿದ್ದಾರೆ.

ಸಿಬಿಐ ಮತ್ತು ಇಡಿ ಅಧಿಕಾರಿಗಳು ಚಿದಂಬರಂ ಅವರಿಗೆ ಹುಡುಕಾಟ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಪಿ ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದ ಬೆನ್ನಲ್ಲೇ ಅವರ ಬಂಧನಕ್ಕೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಹುಡುಕಾಟ ಆರಂಭಿಸಿವೆ.

ತನಿಖಾ ಸಂಸ್ಥೆಗಳ ಕಣ್ಣಿಗೆ ಬೀಳದಂತೆ ತಪ್ಪಿಸಿಕೊಂಡಿರುವ ಚಿದಂಬರಂ ಅವರ ಪರ ವಕೀಲ, ಸುಪ್ರೀಂಕೋರ್ಟ್‌ಗೆ ಜಾಮೀನು ಅರ್ಜಿ ಕುರಿತು ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರ ನಡೆಯಲಿದೆ. ಒಂದು ವೇಳೆ ಚಿದಂಬರಂ ಅವರಿಗೆ ಜಾಮೀನು ದೊರೆತರೆ ಬಂಧನ ಭೀತಿಯಿಂದ ತಪ್ಪಿಸಿಕೊಂಡು ನಿರಾಳರಾಗಲಿದ್ದಾರೆ.
ಒಂದು ವೇಳೆ ಅರ್ಜಿ ತಿರಸ್ಕೃತವಾದರೆ ಅವರು ಸಂಕಷ್ಟಕ್ಕೆ ಒಳಗಾಗಲಿದ್ದಾರೆ.

source: oneindia.com

TheLogicalNews

Disclaimer: This story is auto-aggregated by a computer program and has not been created or edited by TheLogicalNews. Publisher: OneIndia Kannada

Leave a Reply

Your email address will not be published. Required fields are marked *