ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ : ಚಾಲನೆ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಮೈಸೂರು : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ಇಂದು ಮತ್ತು ನಾಳೆ ಆಯೋಜಿಸಿರುವ ಹಲವಾರು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದು, ನಾಳೆ ಚಾಮುಂಡಿಬೆಟ್ಟ ಹಾಗೂ ನಂಜನಗೂಡಿಗೆ ಭೇಟಿ ನೀಡಿ ದೇವರದರ್ಶನ ಪಡೆಯಲಿದ್ದಾರೆ.

ಇನ್ನೂ ಇಂದು ಮೈಸೂರು ಅರಮನೆಯಲ್ಲಿ ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಸಮಾರಂಭ ನಡೆಯುತ್ತಿರುವ ಹಿನ್ನೆಲೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜೊತೆ ಪತ್ನಿ ಸವಿತಾ ಕೋವಿಂದ್ ಕೂಡ ಉಪಸ್ಥಿತರಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿ.ಆರ್.ವಾಲಾ.ಸಚಿವ ಸೋಮಣ್ಣ ಸೇರಿದಂತೆ ಮತ್ತಿತರ ಗಣ್ಯರ ಉಪಸ್ಥಿತರಿದ್ದಾರೆ. ವೇದಿಕೆ ಮುಂಭಾಗದಲ್ಲಿ ಯದುವೀರ್ ದಂಪತಿ ಆಸೀನರಾಗಿದ್ದು, ರಾಷ್ಟ್ರಗೀತೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಜಗತ್ಪ್ರಸಿದ್ಧ ಅರಮನೆಯ ದರ್ಬಾರ್ ಹಾಲ್‌ನಲ್ಲಿ ಸಮಾರಂಭ ಆಯೋಜನೆ ಮಾಡಲಾಗಿದೆ.

TheLogicalNews

Disclaimer: This story is auto-aggregated by a computer program and has not been created or edited by TheLogicalNews. Publisher: Kannada News Now

(Visited 1 times, 1 visits today)
The Logical News

FREE
VIEW
canlı bahis