Maharashtra and Haryana Election 2019 Live: ಇಂದು ಮತದಾನ

ನವದೆಹಲಿ, ಅಕ್ಟೋಬರ್ 21: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆ ಇಂದು(ಸೋಮವಾರ) ನಡೆಯಲಿದ್ದು, ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದೆ.

ಎರಡೂ ರಾಜ್ಯಗಳ ಚುನಾವಣೆ ಕುತೂಹಲ ಕೆರಳಿಸಿದ್ದು, ಮತದಾನದ ನಿಮಿತ್ತ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ. ಎರಡು ರಾಜ್ಯಗಳಲ್ಲೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಮಹಾರಾಷ್ಟ್ರ, ಹರ್ಯಾಣ ಚುನಾವಣೆ; ಸೋಮವಾರ ಮತದಾನ

ಫಲಿತಾಂಶ ಅಕ್ಟೋಬರ್ 24 ರಂದು ಹೊರಬೀಳಲಿದ್ದು, ಕಳೆದ ಏಪ್ರಿಲ್ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಮಾಡಿಕೊಂಡಿವೆ.
ಎರಡೂ ರಾಜ್ಯಗಳಲ್ಲಿ ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಾರಿಯ ಫಲಿತಾಂಶ ಕುತೂಹಲ ಕೆರಳಿಸಿದೆ.

oneindia.com

TheLogicalNews

Disclaimer: This story is auto-aggregated by a computer program and has not been created or edited by TheLogicalNews. Publisher: OneIndia Kannada

(Visited 1 times, 1 visits today)
The Logical News

FREE
VIEW
canlı bahis