ಕನ್ನಡದ ಧ್ವಜದ ಬದಲಿಗೆ ರಾಷ್ಟ್ರಧ್ವಜ ಹಾರಿಸಲು ರಾಜ್ಯ ಸರಕಾರ ಸುತ್ತೋಲೆ

ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಕನ್ನಡದ ಧ್ವಜದ ಬದಲಿಗೆ ರಾಷ್ಟ್ರ ಧ್ವಜವನ್ನು ಹಾರಿಸುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಸಂಪ್ರದಾಯವನ್ನು ಬದಿಗೊತ್ತಿ ನಾಳೆ ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ ರಾಜ್ಯದ ಅಧಿಕೃತ ಧ್ವಜದ ಬದಲಿಗೆ ತಿರಂಗಾ ಹಾರಾಡಲಿದೆ.

ಕರ್ನಾಟಕ ರಾಜ್ಯ ಏಕೀಕರಣಗೊಂಡ ನೆನಪಿಗಾಗಿ ಪ್ರತೀ ವರ್ಷ ನವಂಬರ್ 01ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಈ ದಿವಸ ಕನ್ನಡದ ಬಾವುಟ ಹಾರುತ್ತದೆ. ಆದರೆ ಈ ಸಂಪ್ರದಾಯಕ್ಕೆ ಯಡಿಯೂರಪ್ಪ ನೇತೃತ್ವದ ಭಾರತೀಯ ಜನತಾ ಪಕ್ಷ ಸರಕಾರ ಅಂತ್ಯ ಹಾಡುವ ಲಕ್ಷಣ ಈ ಬಾರಿ ಗೋಚರಿಸಿದೆ.

ರಾಜ್ಯ ಸರಕಾರದ ಈ ನಿರ್ಧಾರಕ್ಕೆ ಕನ್ನಡ ಪರ ಸಂಘಟನೆಗಳು ಮತ್ತು ಕನ್ನಡಿಗರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ರಾಷ್ಟ್ರ ಧ್ವಜಕ್ಕೆ ಚ್ಯುತಿ ಬರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

TheLogicalNews

Disclaimer: This story is auto-aggregated by a computer program and has not been created or edited by TheLogicalNews. Publisher: Udayavani

(Visited 1 times, 1 visits today)
The Logical News

FREE
VIEW
canlı bahis