‘ರೇಷನ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ವಿತರಣೆ’

ಉಪ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿ ಸರ್ಕಾರ ಪತನವಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಚುನಾವಣೆ ಪ್ರಚಾರ ಕೈಗೊಂಡಿದ್ದ ಸಿದ್ದರಾಮಯ್ಯ, 15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಯಡಿಯೂರಪ್ಪ ಮನೆಗೆ ಹೋಗಲಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಬಿಜೆಪಿ ಸರ್ಕಾರ ಸರಿಯಾಗಿ ಅನುದಾನ ಕೊಡುತ್ತಿಲ್ಲ. ಕಾರ್ಡ್ ದಾರರಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 4 ಕೆಜಿಗೆ ಇಳಿಸಿದ್ದಾರೆ. ನಾವು ಅಧಿಕಾರಕ್ಕೆ ಬಂದಲ್ಲಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಘೋಷಿಸಿದ್ದಾರೆ.

TheLogicalNews

Disclaimer: This story is auto-aggregated by a computer program and has not been created or edited by TheLogicalNews. Publisher: Kannada Dunia

The Logical News - TLN

FREE
VIEW
canlı bahis